ಬೆಂಗಳೂರಿನಲ್ಲಿ ಸ್ಟಿಂಗ್ ಆಪರೇಷನ್ ಆರೋಪಿಯ ಫೋಟೋ ಬಿಡುಗಡೆ ಮಾಡಿದ ಎಚ್.ಡಿ. ಕುಮಾರಸ್ವಾಮಿ
ಸ್ಟಿಂಗ್ ಆಪರೇಷನ್ ಬಾಂಬ್ ರಾಜ್ಯ ರಾಜಕೀಯದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಸ್ಟಿಂಗ್ ವಿಚಾರದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಸ್ಟಿಂಗ್ ಆಪರೇಷನ್ ಸೂತ್ರಧಾರಿಯ ಹೆಸರು ಇನ್ನೂ ರಿವೀಲ್ ಆಗಿಲ್ಲ.. ಆದ್ರೆ ಕುಮಾರಸ್...

ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಾಗೇಪಲ್ಲಿಯ ಪ್ರಶಾಂತ್ ಎಂಬಾತನ ಫೋಟೋವನ್ನು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ವ್ಯಕ್ತಿಗೂ ಕಾಂಗ್ರೆಸ್ ಹೈಕಮಾಂಡ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೂ ನಂಟಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರವು ಕ್ರಿಮಿನಲ್ಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿಕಾರಿರುವ ಅವರು, ಈ ಕುರಿತು ಮುಂದಿನ ಹೋರಾಟದ ರೂಪುರೇಷೆಗಳನ್ನು ಚರ್ಚಿಸಲು ಶನಿವಾರ ಸಭೆ ಕರೆದಿದ್ದಾರೆ.




