ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಬೆಂಗಳೂರಿನಲ್ಲಿ ಸ್ಟಿಂಗ್ ಆಪರೇಷನ್ ಕಿಂಗ್‌ಪಿನ್ ಬಂಧನಕ್ಕೆ ಕುಮಾರಸ್ವಾಮಿ ಆಗ್ರಹ

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸೈಬರ್ ಕ್ರೈಮ್ ಪೊಲೀಸರು 3 ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸ್ಟಿಂಗ್ ಆಪರೇಷನ್ ಪ್ರಕರಣದ ಕಿಂಗ್​ಪಿನ್​​​ ಬಂಧಿಸುವಂತೆ ಆಗ್ರಹಿಸ...

· ಬೆಂಗಳೂರು ನಗರ
ಸಿದ್ದರಾಮಯ್ಯ ಹೆಸ್ರು ಹಾಳು ಮಾಡಲು ಸ್ಟಿಂಗ್ ಮಾಡಿದ್ದಾರೆ; ಇದನ್ನೆಲ್ಲಾ ನೋಡಿ ಅವರ ರಕ್ತ ಕುದಿಯುತ್ತಿಲ್ವಾ; ಹೆಚ್​ಡಿಕೆ ಪ್ರಶ್ನೆ
ಹಂಚಿಕೊಳ್ಳಿ:

ಬೆಂಗಳೂರಿನಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣದ ಕಿಂಗ್‌ಪಿನ್ ಅನ್ನು ಬಂಧಿಸಬೇಕೆಂದು ಆಗ್ರಹಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ ಡಿಜಿಪಿ ಸಲೀಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದಲೇ ಈ ಕೃತ್ಯ ನಡೆದಿದೆ ಎಂದು ಆರೋಪಿಸಿದ ಕುಮಾರಸ್ವಾಮಿ, ಈ ಪ್ರಕರಣದ ಹಿಂದೆ ಇರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಫ್ರೀಡಂಪಾರ್ಕ್ ಬಳಿ ನಡೆದ ಪ್ರತಿಭಟನೆಯ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯವನ್ನು ಟೀಕಿಸಿದ್ದು, ತನಿಖೆ ವಿಳಂಬವಾದರೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಲಿದೆ ಎಂದು ಎಚ್ಚರಿಕೆ ನೀಡಿದರು.

ಹಂಚಿಕೊಳ್ಳಿ: