ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ರಾಜೀನಾಮೆ
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನಮಾನವಿಲ್ಲದ ಕಾರಣ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರಿಗೆ ಆಗಸ್ಟ್ 20ರಂದು ಪತ್ರ ಬರೆದಿದ್ದ ಈ ನಿರ್ಧ...

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ಕಾರಣಕ್ಕೆ ಸೌಮ್ಯಾ ರೆಡ್ಡಿ ಅವರು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟದಲ್ಲಿ ಮಹಿಳಾ ಸಚಿವರೇ ಇಲ್ಲದಿರುವ ವಿಷಯದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಅವರು ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಹೊಸ ಅಧ್ಯಕ್ಷರ ನೇಮಕದವರೆಗೆ ತಾವು ಜವಾಬ್ದಾರಿಯಲ್ಲಿ ಮುಂದುವರಿಯುವುದಾಗಿ ತಿಳಿಸಿರುವ ಅವರು, ಭವಿಷ್ಯದಲ್ಲಿ ಪಕ್ಷದ ಸಾಮಾನ್ಯ ಕಾರ್ಯಕರ್ತೆಯಾಗಿ ಚುನಾವಣಾ ಗೆಲುವಿಗೆ ದುಡಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.




