ಬಿಜೆಪಿ ಸೇರಲು 25 ಕಾಂಗ್ರೆಸ್ ಶಾಸಕರು ಸಿದ್ಧ: ವಿಜಯೇಂದ್ರ ಬಾಂಬ್
ವಿಧಾನಸಭೆ ಚುನಾವಣೆ ಘೋಷಣೆಯಾದರೆ ಡಿಕೆ ಶಿವಕುಮಾರ್ ಸಂಪುಟದ ಸಚಿವರೂ ಸೇರಿ 20 ರಿಂದ 25 ಜನ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ ಎಂದು ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ...

ಬೆಂಗಳೂರು, (ಅಕ್ಟೋಬರ್ 12): ವಿಧಾನಸಭೆ ಚುನಾವಣೆ ಘೋಷಣೆಯಾದಲ್ಲಿ ಡಿಕೆ ಶಿವಕುಮಾರ್ ಸಂಪುಟದ ಸಚಿವರು ಸೇರಿದಂತೆ 20 ರಿಂದ 25 ಮಂದಿ ಶಾಸಕರು ಬಿಜೆಪಿ ಸೇರ್ಪಡೆಯಾಗಲು ಸಿದ್ಧರಿದ್ದಾರೆ ಎಂದು ವಿಜಯೇಂದ್ರ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ, ನಾವು ಯಾರನ್ನೂ ಕರೆತರುತ್ತಿಲ್ಲ. ಆದರೆ ನಾಳೆಯೇ ಚುನಾವಣೆ ಘೋಷಣೆಯಾದರೆ ಸಚಿವರನ್ನು ಒಳಗೊಂಡು 25 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ. ಅಂತಹ ಸನ್ನಿವೇಶ ಈಗ ನಿರ್ಮಾಣವಾಗಿದೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ವಿಶ್ವಾಸ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದಲ್ಲಿಯೇ ಸಿಎಂ ಮೇಲೆ ನಂಬಿಕೆ ಹೋಗಿದೆ ಎಂದು ತಿಳಿಸಿದ್ದಾರೆ.
ಕೆಲವರು ಸಚಿವರಾಗಲು, ಇನ್ನು ಕೆಲವರು ಸಿಎಂ ಆಗಲು ಸ್ಟಿಂಗ್ ಮಾಡಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಸ್ಟಿಂಗ್ ಆಪರೇಷನ್ ನಂತಹ ಬೆಳವಣಿಗೆಗಳು ಕರ್ನಾಟಕದ ರಾಜಕೀಯದ ದೃಷ್ಟಿಯಿಂದ ಉತ್ತಮವಲ್ಲ. ಯಾರು ಯಾರ ವಿರುದ್ಧ ಸ್ಟಿಂಗ್ ಮಾಡಿದ್ದಾರೆ ಎಂಬುದು ಎಲ್ಲೆಡೆ ಚರ್ಚೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಹೊರಬರಲಿದೆ. 420 ಕೆಲಸ ಮಾಡಿದವರು ಅನುಭವಿಸಬೇಕಾಗುತ್ತದೆ. ಕರ್ನಾಟಕದ ರಾಜಕಾರಣ ಈ ಮಟ್ಟಕ್ಕೆ ಇಳಿಯಬಾರದಿತ್ತು, ದುರದೃಷ್ಟವಶಾತ್ ಇಳಿದಿದೆ. ಸ್ಟಿಂಗ್ ಮಾಡುವುದು ರಾಜಕೀಯ ವ್ಯಭಿಚಾರದಂತೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



