ದಾವಣಗೆರೆಯಲ್ಲಿ ಹಾಲಿನ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ
ದೀಪಾವಳಿ ಮತ್ತು ರಾಜ್ಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಹಾಲಿನ ದರ ಹೆಚ್ಚಿಸಿ ಜನರಿಗೆ ಬರೆ ಎಳೆದಿದೆ ಎಂದು ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು...

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವುದು ಜನಸಾಮಾನ್ಯರಿಗೆ ಹೊರೆಯಾಗಿದೆ ಎಂದು ಟೀಕಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜೀವನ ದುಬಾರಿಯಾಗಿದ್ದು, ಮದುವೆಯಾದವರು ಮಕ್ಕಳನ್ನು ಪಡೆಯಲು ಯೋಚಿಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದರು. ರೈತರಿಗೆ ಪ್ರೋತ್ಸಾಹ ಧನ ನೀಡುವ ನೆಪದಲ್ಲಿ ಗ್ರಾಹಕರ ಮೇಲೆ ಆರ್ಥಿಕ ಹೊರೆಯನ್ನು ಹೇರುತ್ತಿರುವ ಸರ್ಕಾರವನ್ನು ಅವರು ತೀವ್ರವಾಗಿ ಖಂಡಿಸಿದರು. ಅಲ್ಲದೆ, ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿಗೆ ಪ್ರಧಾನಿ ಮೋದಿಯವರೇ ಕಾರಣ ಎಂಬ ಉಗ್ರಪ್ಪ ಅವರ ಆರೋಪಕ್ಕೆ ವಿಜಯೇಂದ್ರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.




