ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಹಾಸನ: 2028ರಲ್ಲಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದ ಕುಮಾರಸ್ವಾಮಿ

2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಬರುವುದು ಶತಃಸಿದ್ಧ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಗೃಹ ಸಚಿವರ ನಡೆ ನೋಡಿದ್ರೆ ಹುನ್ನಾರ ನಡೆದಿದೆ ಎನ್ನಿಸುತ್ತಿದೆ. ನನ್ನನ್ನು ಪ್ರಚೋದ...

· ಹಾಸನ
2028ಕ್ಕೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಶತಃಸಿದ್ಧ: ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ
ಹಂಚಿಕೊಳ್ಳಿ:

ಹಾಸನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, 2028ರ ರಾಜ್ಯ ವಿಧಾನಸಭೆ ಚುನಾವಣೆಯ ನಂತರ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಮತ್ತು ಸ್ಟಿಂಗ್ ಆಪರೇಷನ್ ಪ್ರಕರಣಗಳ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೆಪಿಎಸ್‍ಸಿ ಹಗರಣದ ವಿಷಯದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಅವರು ಕಿಡಿಕಾರಿದ್ದಾರೆ. ಇದಕ್ಕೆ ಪ್ರತಿಯಾಗಿ ಪ್ರಿಯಾಂಕ್ ಖರ್ಗೆ ಅವರು, ತಾನು ಯಾರ ನಿರ್ದೇಶನದ ಮೇರೆಗೂ ಮಾತನಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಹಂಚಿಕೊಳ್ಳಿ: