ಹಾಸನದಲ್ಲಿ ಡಿಸಿ ಮತ್ತು ಸಚಿವ ಶಿವಲಿಂಗೇಗೌಡರ ವಿರುದ್ಧ ಲಂಚದ ಆರೋಪ ಹೊರಿಸಿದ ಹೆಚ್.ಡಿ.ಕುಮಾರಸ್ವಾಮಿ
ಹಾಸನ ಡಿಸಿ ಹಾಗೂ ಸಚಿವ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಡಿಸಿ ಪಿಎ ಅವರದ್ದು ಎನ್ನಲಾದ 70 ಲಕ್ಷಕ್ಕೂ ಅಧಿಕ ಲಂಚದ ವಾಟ್ಸಾಪ್ ಚಾಟ್‌ಗಳನ್ನು...

ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಪಿಎ ಶಶಿಕಿರಣ್ ಅವರದ್ದು ಎನ್ನಲಾದ ವಾಟ್ಸಾಪ್ ಸಂಭಾಷಣೆಯನ್ನು ಬಹಿರಂಗಪಡಿಸಿದ ಅವರು, ಕ್ರಷರ್ ಫೈಲ್‌ಗಳ ವಿಲೇವಾರಿಗೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ಹಣದ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದ್ದಾರೆ. ಸಚಿವ ಶಿವಲಿಂಗೇಗೌಡರ ಹೆಸರು ಈ ಪ್ರಕರಣದಲ್ಲಿ ಕೇಳಿಬಂದಿದ್ದು, ಅರಸೀಕೆರೆ ತಹಶೀಲ್ದಾರ್ ಸಂತೋಷ್ ಅವರ ಮೂಲಕ ಹಣ ಪಾವತಿಯಾಗಿದೆ ಎಂದು ಅವರು ದೂರಿದ್ದಾರೆ. ಈ ವಿಷಯದ ಬಗ್ಗೆ ಡಿಜಿ ಮತ್ತು ಐಜಿಪಿ ಡಾ.ಎಂ.ಎ.ಸಲೀಂ ಅವರು ತನಿಖೆ ನಡೆಸಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.




