ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಹಾವೇರಿಯಲ್ಲಿ ಈಶ್ವರಪ್ಪ ಮತ್ತು ಯತ್ನಾಳ್ ಪಕ್ಷ ಸೇರ್ಪಡೆ ಬಗ್ಗೆ ಬೊಮ್ಮಾಯಿ ಸುಳಿವು

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯಲ್ಲಿ 'ಘರ್ ವಾಪ್ಸಿ' ಚರ್ಚೆಗಳು ಗರಿಗೆದರಿವೆ. ಯತ್ನಾಳ್ ಮತ್ತು ಈಶ್ವರಪ್ಪ ಅವರನ್ನು ಮರಳಿ ಕರೆತರುವ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ....

· ಹಾವೇರಿ
ಈಶ್ವರಪ್ಪ, ಯತ್ನಾಳ್ ಘರ್‍‌ವಾಪ್ಸಿಗೆ ತೆರೆಮರೆ ರಣತಂತ್ರ.. ಬಿಜೆಪಿಗೆ ಸವಾಲ್ ಆದರಾ ಅನಂತಕುಮಾರ್ ಹೆಗಡೆ?
ಹಂಚಿಕೊಳ್ಳಿ:

ಶಿಗ್ಗಾವಿಯಲ್ಲಿ ಮಾತನಾಡಿದ ಸಂಸದ ಬಸವರಾಜ್ ಬೊಮ್ಮಾಯಿ, ಕೆ.ಎಸ್. ಈಶ್ವರಪ್ಪ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಕುರಿತು ಹೈಕಮಾಂಡ್ ಜೊತೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಲು ಪಕ್ಷದ ನಾಯಕರು ಒಂದಾಗಬೇಕು ಎಂಬುದು ಜನರ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಈ ವಿಷಯದ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಇದರೊಂದಿಗೆ ಬಿ.ಎಸ್. ಯಡಿಯೂರಪ್ಪ ಅವರು ಈಶ್ವರಪ್ಪ ಅವರನ್ನು ಭೇಟಿಯಾಗಿರುವುದು ಮತ್ತು ಅನಂತಕುಮಾರ್ ಹೆಗಡೆ ಅವರ ಸಕ್ರಿಯತೆ ಬಗ್ಗೆಯೂ ಬಿಜೆಪಿಯಲ್ಲಿ ಚರ್ಚೆಗಳು ಆರಂಭವಾಗಿವೆ.

ಹಂಚಿಕೊಳ್ಳಿ: