ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ರಾಜಕೀಯ

ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ನಿಜ: ಶೀಘ್ರವೇ ಮಾತೃ ಪಕ್ಷಕ್ಕೆ ಮಾಜಿ ಶಾಸಕ ರಘುಪತಿ ಭಟ್ ಗುಡ್ ಬೈ?

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ, ಬಿಜೆಪಿ ಮತ್ತು ಸಂಘ ಪರಿವಾರದ ಪ್ರಮುಖ ನಾಯಕರೆಂದೆ ಗುರುತಿಸಲ್ಪಟ್ಟಿದ್ದ ಮಾಜಿ ಶಾಸಕ ರಘುಪತಿ ಭಟ್, ಅವರ ವಿಚಾರದಲ್ಲಿ ಹೊಸ ಸುದ್ದಿಯೊಂದು ವೈರಲ್ ಆಗುತ್ತಿದೆ. ಅವರು ತಮ್...

· ಉಡುಪಿ
ಕಾಂಗ್ರೆಸ್ ನಿಂದ ಆಫರ್ ಬಂದಿರುವುದು ನಿಜ: ಶೀಘ್ರವೇ ಮಾತೃ ಪಕ್ಷಕ್ಕೆ ಮಾಜಿ ಶಾಸಕ ರಘುಪತಿ ಭಟ್ ಗುಡ್ ಬೈ?
ಹಂಚಿಕೊಳ್ಳಿ:

ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಗಳ ನಡುವೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜವೆಂದು ಒಪ್ಪಿಕೊಂಡಿರುವ ಅವರು, ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬಿಜೆಪಿ ಕಡೆಯಿಂದಲೂ ಕರೆ ಬಂದರೆ ಪರಿಗಣಿಸುವುದಾಗಿ ಹೇಳಿರುವ ಅವರು, ಪಕ್ಷ ಬದಲಾವಣೆಯಂತಹ ದೊಡ್ಡ ನಿರ್ಧಾರವನ್ನು ಆತುರದಲ್ಲಿ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ಅಲ್ಲದೆ, 2023ರ ಚುನಾವಣೆಯಲ್ಲಿ ಯಶಪಾಲ್ ಸುವರ್ಣ ಗೆಲುವಿಗೆ ಶ್ರಮಿಸಿದರೂ, ಬಳಿಕ ಅವರು ತೋರಿದ ನಡವಳಿಕೆಯಿಂದ ತಮಗೆ ನೋವಾಗಿದೆ ಎಂದು ರಘುಪತಿ ಭಟ್ ಬೇಸರ ವ್ಯಕ್ತಪಡಿಸಿದ್ದಾರೆ.

ಹಂಚಿಕೊಳ್ಳಿ: