ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ರಾಜಕೀಯ

ಕಲಬುರಗಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದೇಶದಲ್ಲಿ ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿದ್ದು, ಜನತೆ ಬೇಸತ್ತು ಹೋಗಿದ್ದಾರೆ ಎಂದು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸ...

· ಕಲಬುರಗಿ
‘ಮೋದಿಯದ್ದು ಹಿಟ್ಲರ್ ಶಾಹಿ ಆಡಳಿತ, ಎನ್​ಡಿಎ ಸರ್ಕಾರದ ವಿರುದ್ಧ ಜನ ಬೇಸತ್ತಿದ್ದಾರೆ’: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಹಂಚಿಕೊಳ್ಳಿ:

ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವು ಹಿಟ್ಲರ್ ಶಾಹಿಯನ್ನು ಹೋಲುತ್ತದೆ ಎಂದು ಟೀಕಿಸಿದ್ದಾರೆ. ಎನ್ ಡಿಎ ಸರ್ಕಾರದ ವೈಫಲ್ಯಗಳಿಂದಾಗಿ ಜನರು ಬೇಸತ್ತಿದ್ದು, ಮೈತ್ರಿಕೂಟದಿಂದ ಹಲವರು ದೂರವಾಗುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸಿ ಯುವಕರ ಭವಿಷ್ಯದೊಂದಿಗೆ ಮೋದಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಅವರು ದೂರಿದರು. ಅಲ್ಲದೆ, ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಖರ್ಗೆ, ಪ್ರಜಾಪ್ರಭುತ್ವವನ್ನು ನಾಶಪಡಿಸಿ ಸರ್ವಾಧಿಕಾರವನ್ನು ಸ್ಥಾಪಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದರು.

ಹಂಚಿಕೊಳ್ಳಿ: