ಮೈಸೂರಿನ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಳ್ಳಲಿರುವ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್
Veerappa Moily s book launch mysuru: ಸ್ಟಿಂಗ್ ಆಪರೇಷನ್ ವಿವಾದದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಿಎಂ ಡಿ.ಕೆ. ಶಿವಕುಮಾರ್ ಇಂದು ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ. ಇವ...

ನವೆಂಬರ್ 11ರಂದು ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿ ಆಯೋಜಿಸಿರುವ ವೀರಪ್ಪ ಮೊಯ್ಲಿ ಅವರ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ. ಇಬ್ಬರೂ ನಾಯಕರು ಪ್ರತ್ಯೇಕ ವಿಮಾನ ಮತ್ತು ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಆಗಮಿಸುತ್ತಿರುವುದು ಕುತೂಹಲ ಮೂಡಿಸಿದೆ. ಸ್ಟಿಂಗ್ ಆಪರೇಷನ್ ವಿವಾದದ ನಂತರ ಉಭಯ ನಾಯಕರ ನಡುವೆ ಅಂತರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮದಲ್ಲಿ ಅವರ ಭೇಟಿ ಮತ್ತು ವರ್ತನೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಕಾರ್ಯಕ್ರಮದ ನಂತರ ಇಬ್ಬರೂ ನಾಯಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳಲಿದ್ದಾರೆ.




