ಮೈಸೂರು: ಬಾಂಬೆ ಡೇಸ್ ಪುಸ್ತಕ ಬಿಡುಗಡೆ ಮಾಡುವುದಿಲ್ಲ ಎಂದ ಎಚ್. ವಿಶ್ವನಾಥ್
ಮೈಸೂರು: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ವಿಶ್ವನಾಥ್ ಇದೀಗ ಸ್ಫೋಟಕ ಹೇಳಿಕೆ ನೀಡಿದ್ದು, ‘ಬಾಂಬೆ ಡೇಸ್’ ಪುಸ್ತಕವನ್ನು ನಾನು ಬಿಡ...

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಪ್ರಕರಣಗಳು ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಮಾಜಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ತಾವು ಬರೆದಿರುವ ಬಾಂಬೆ ಡೇಸ್ ಕೃತಿಯನ್ನು ಪ್ರಕಟಿಸದಿರಲು ಅವರು ತೀರ್ಮಾನಿಸಿದ್ದಾರೆ. ರಾಜಕೀಯ ವ್ಯವಸ್ಥೆಯ ಬಗ್ಗೆ ಜನರಿಗೆ ಈಗಾಗಲೇ ಇರುವ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಲು ತಮಗೆ ಇಷ್ಟವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಪುಸ್ತಕ ಬಿಡುಗಡೆಯಾದರೆ ಮೂರೂ ಪಕ್ಷಗಳ ಹಿರಿಯ ನಾಯಕರು ಮುಜುಗರಕ್ಕೆ ಒಳಗಾಗಲಿದ್ದಾರೆ ಎಂದು ಈ ಹಿಂದೆ ಅವರು ಎಚ್ಚರಿಕೆ ನೀಡಿದ್ದರು. ಸದ್ಯದ ರಾಜಕೀಯ ಬೆಳವಣಿಗೆಗಳು ನಾಚಿಕೆಗೇಡಿನ ಸಂಗತಿಯಾಗಿದ್ದು, ಇಂತಹ ಕೆಟ್ಟ ರಾಜಕಾರಣದಿಂದ ಎಲ್ಲರಿಗೂ ಮುಜುಗರ ಉಂಟಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.




