ಮೈಸೂರು: ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ - ಯತೀಂದ್ರ
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವರ್ಚಸ್ಸಿಗೆ ಧಕ್ಕೆ ತರಲು ಮತ್ತು ಬ್ಲ್ಯಾಕ್‌ಮೇಲ್ ಮಾಡಲು ನಡೆದ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ನಾಯಕರೇ ಇದ್ದಾರೆ ಎಂದು ಡಾ. ಯತೀಂದ್ರ ಆರೋಪಿಸಿದ್ದಾರೆ. ಪತ್ರಕರ್ತ ರಾಕೇಶ್ ಶೆಟ್ಟಿ...

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸನ್ನು ಹಾಳು ಮಾಡುವ ಉದ್ದೇಶದಿಂದಲೇ ಈ ಸ್ಟಿಂಗ್ ಆಪರೇಷನ್ ನಡೆಸಲಾಗಿದೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕೃತ್ಯದ ಹಿಂದೆ ಸ್ವಪಕ್ಷೀಯರೇ ಕೈವಾಡ ಹೊಂದಿದ್ದಾರೆ ಎಂಬುದು ನೋವಿನ ಸಂಗತಿಯಾಗಿದ್ದು, ಟಿಕೆಟ್ ಪಡೆಯಲು ಈ ರೀತಿಯ ಬ್ಲ್ಯಾಕ್‌ಮೇಲ್ ತಂತ್ರ ಬಳಸಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ. ಈಗಾಗಲೇ ಪತ್ರಕರ್ತ ರಾಕೇಶ್ ಶೆಟ್ಟಿ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ತೃಪ್ತಿಕರವಾಗಿ ನಡೆಯದಿದ್ದರೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸುವುದಾಗಿ ಯತೀಂದ್ರ ಎಚ್ಚರಿಕೆ ನೀಡಿದ್ದಾರೆ.




