ಮುಖ್ಯಮಂತ್ರಿಗಳೇ ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು..?
ಬೆಂಗಳೂರು: ಜನರ ಜೇಬಿಗೆ ಮತ್ತೊಂದು ಹೊಡೆತ ನೀಡಲು ರಾಜ್ಯದ ಕಾಂಗ್ರೆಸ್ ಸರ್ಕಾರ ಸಜ್ಜಾಗಿದ್ದು, ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು ಎಂದು ಮುಖ್ಯಮಂತ್ರಿ ಡಿಕೆ.ಶಿವಕು...

ಬೆಂಗಳೂರು: ಜನರ ಜೇಬಿಗೆ ಮತ್ತೊಂದು ಹೊಡೆತ ನೀಡಲು ರಾಜ್ಯದ ಕಾಂಗ್ರೆಸ್ ಸರ್ಕಾರ ಸಜ್ಜಾಗಿದ್ದು, ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು ಎಂದು ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆ ಹಾಗೂ ಹಣಕಾಸಿನ ನಿರ್ವಹಣೆಯ ವೈಫಲ್ಯದ ಹೊರೆ ಇದೀಗ ಒಂದೊಂದಾಗಿ ಜನರ ಮೇಲೆ ಹಾಕಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8ರವರೆಗೆ ಹೆಚ್ಚಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಬೆನ್ನಲ್ಲೇ ಬಿಎಂಟಿಸಿ ಸೇರಿದಂತೆ ರಾಜ್ಯದ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.10ರಿಂದ 13ರವರೆಗೆ ಹೆಚ್ಚಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ಜನರು ಹಲವು ರೀತಿಯ ಆರ್ಥಿಕ ಹೊರೆ ಎದುರಿಸುತ್ತಿರುವಾಗ ಮತ್ತಷ್ಟು ಹೊರೆ ಹಾಕುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಬಸ್ ಪ್ರಯಾಣ ದರ ಏರಿಕೆ, ವಿದ್ಯುತ್ ಶುಲ್ಕ ಹೆಚ್ಚಳ, ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಆಸ್ತಿ ನೋಂದಣಿ ಶುಲ್ಕ ದುಪ್ಪಟ್ಟು, ನೀರು ಮತ್ತು ತ್ಯಾಜ್ಯ ನಿರ್ವಹಣೆ ಶುಲ್ಕಗಳ ಹೆಚ್ಚಳ ಹಾಗೂ ಮೆಟ್ರೋ ಪ್ರಯಾಣ ದರ ಏರಿಕೆ ಸೇರಿದಂತೆ ಹಲವು ಕ್ರಮಗಳನ್ನು ಅವರು ಉಲ್ಲೇಖಿಸಿದ್ದಾರೆ.
ಒಂದೆಡೆ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ನೀಡಿದ ಹಣ, ಮತ್ತೊಂದೆಡೆ ತೆರಿಗೆ ಹಾಗೂ ಬೆಲೆ ಏರಿಕೆಯ ಮೂಲಕ ಜನರ ಜೇಬಿನಿಂದಲೇ ಎರಡು ಪಟ್ಟು ವಾಪಸ್ ಪಡೆಯುತ್ತಿದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರ.
ಹಾಲು ಖರೀದಿಸುವ ಕುಟುಂಬದಿಂದ ಹಿಡಿದು ಪ್ರತಿದಿನ ಬಸ್‌ನಲ್ಲಿ ಪ್ರಯಾಣಿಸುವ ಕಾರ್ಮಿಕರು, ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಮಧ್ಯಮ ವರ್ಗದ ಕುಟುಂಬಗಳವರೆಗೆ ಈ ಬೆಲೆ ಏರಿಕೆಯ ಹೊರೆ ನೇರವಾಗಿ ಜನರ ಬದುಕಿನ ಮೇಲೆ ಬೀಳಲಿದೆ.
ಜನರ ಬದುಕನ್ನು ಸುಗಮಗೊಳಿಸಬೇಕಾದ ಸರ್ಕಾರ ತನ್ನ ಅವ್ಯವಸ್ಥೆಯ ಹೊರೆ ಜನರ ಮೇಲೆಯೇ ಹಾಕುತ್ತಾ ಸಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮ ಸರ್ಕಾರದ ಹಣಕಾಸಿನ ನಿರ್ವಹಣೆಯ ವೈಫಲ್ಯಕ್ಕೆ ಕರ್ನಾಟಕದ ಜನರು ಏಕೆ ಬೆಲೆ ತೆರಬೇಕು?” ಎಂದು ಪ್ರಶ್ನಿಸಿದ್ದಾರೆ.




