ಮುಖ್ಯ ವಿಷಯಕ್ಕೆ ಹೋಗಿ
The Karnataka Today
27 Sept
ಸುದ್ದಿಯಲ್ಲಿ
ರಾಜಕೀಯ

ರಾಜ್ಯ ವಿಧಾನಸಭಾ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಬಿಜೆಪಿಗೆ ಮುಖಭಂಗ

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ.ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ...

ಸಂಪಾದಕ· 1 ನಿಮಿಷ ಓದು
ರಾಜ್ಯ ವಿಧಾನಸಭಾ ಉಪಚುನಾವಣೆ ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ ಕಾಂಗ್ರೆಸ್ ಬಿಜೆಪಿಗೆ ಮುಖಭಂಗ
ಹಂಚಿಕೊಳ್ಳಿ:

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದ ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಈಗ ಪ್ರಕಟವಾಗಿದೆ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯಶಾಲಿಯಾಗಿದೆ.

ಮೊದಲಿಂದಲೂ ಕಾರ್ಯಕರ್ತರ ಪಕ್ಷ ಅಂತ ಹೇಳಿಕೊಂಡು ಬರುತ್ತಿದ್ದ ಬಿಜೆಪಿ ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ಕೆಲವು ನಾಯಕರು ತಮ್ಮ ಮಕ್ಕಳನ್ನು ಬೆಳೆಸುವ ಉದ್ದೇಶದಿಂದ

ಪಕ್ಷದಲ್ಲಿ ಬಣ ರಾಜಕೀಯ ಮಾಡಿಕೊಂಡು ಕಾರ್ಯಕರ್ತರನ್ನು ಮೂಲೆಗುಂಪು ಮಾಡಿರುವುದು ಮತ್ತು ವಿರೋಧ ಪಕ್ಷವಾಗಿ ಸರಕಾರದ ತಪ್ಪು ನಡೆ ಮತ್ತು ಅಕ್ರಮಗಳ ವಿರುದ್ಧವಾಗಿ ಹೋರಾಡುವುದರಲ್ಲಿ ವಿಫಲವಾಗಿರುವುದು,

ಈ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ ಎಂದು ಕಾರ್ಯಕರ್ತರ ವಾದವಾಗಿದೆ

ಬಿಜೆಪಿಗೆ ಬಾರಿ ಮುಖಭಂಗವಾಗಿದೆ ಇಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಸೋಲಾಗಿದೆ.

ಸಿದ್ಧಾಂತದ ಬಗ್ಗೆ ಮಾತನಾಡುವ ಬಿಜೆಪಿ ಹಾಗೂ ಜೆಡಿಎಸ್ ನ ವಂಶಪಾರಂಪರ್ಯ ರಾಜಕೀಯಕ್ಕೆ ಸರಿಯಾದ ಉತ್ತರ ಮತದಾರರು ಕೊಟ್ಟಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಯವರನ್ನು ಸೋಲಿಸಿ ಸಿಪಿ ಯೋಗೇಶ್ವರ್ ವಿಜಯಶಾಲಿಯಾಗಿದ್ದಾರೆ

.ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ ಅನ್ನಪೂರ್ಣ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ ಜಯಗಳಿಸಿದ್ದಾರೆ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ‌ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಹಂಚಿಕೊಳ್ಳಿ: