ಮುಖ್ಯ ವಿಷಯಕ್ಕೆ ಹೋಗಿ
The Karnataka Today
7 Oct
Latest
ರಾಜಕೀಯ

ರಾಜ್ಯದಲ್ಲಿ ಪೊಲೀಸ್ ಠಾಣೆಗಳು 'ಕೈ' ಕಚೇರಿಗಳಾಗಿ ಮಾರ್ಪಟ್ಟಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ವೈಫಲ್ಯ ಮರೆಮಾಚಲು ಕಪಟ ನಾಟಕ- BJP

ಧಾರವಾಡ: "ರಾಜ್ಯದಲ್ಲಿ ಸರಣಿ ಕೊಲೆಗಳು, ಕಾನೂನು ಸುವ್ಯವಸ್ಥೆ ಕುಸಿತ, ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಅಸ್ಥಿರಗೊಂಡಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ...

· ಧಾರವಾಡ
ರಾಜ್ಯದಲ್ಲಿ ಪೊಲೀಸ್ ಠಾಣೆಗಳು 'ಕೈ' ಕಚೇರಿಗಳಾಗಿವೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ: ವೈಫಲ್ಯ ಮುಚ್ಚಿಹಾಕಲು ಕಪಟ ನಾಟಕ- BJP
ಹಂಚಿಕೊಳ್ಳಿ:

ಧಾರವಾಡ: "ರಾಜ್ಯದಲ್ಲಿ ಸರಣಿ ಕೊಲೆಗಳು, ಕಾನೂನು ಸುವ್ಯವಸ್ಥೆ ಕುಸಿತ, ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಅಸ್ಥಿರಗೊಂಡಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಪಶ್ಚಿಮ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ವಿ. ಸಂಕನೂರು ನಾಮಪತ್ರ ಸಲ್ಲಿಸುವ ಮುನ್ನ ಮಾತನಾಡಿದ ಅವರು, ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಬದಲಾಗಿವೆ. ಬೆಲೆ ಏರಿಕೆ, ನಿರುದ್ಯೋಗ, ಎಸ್‌ಐಆರ್‌ ಕುರಿತು ಗೊಂದಲ ಸೃಷ್ಟಿಸುವುದು ಹಾಗೂ ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಭರವಸೆ ನೀಡುವುದು ಕಾಂಗ್ರೆಸ್ ಸರ್ಕಾರದ ಕೊಡುಗೆಗಳು ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಅಸ್ಥಿರವಾಗಿದ್ದು, ರಾಜ್ಯದ ಆರ್ಥಿಕ ಪರಿಸ್ಥಿತಿ ಶೋಚನೀಯವಾಗಿದೆ. ಇದರಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೇಲೆ ತೀವ್ರ ಒತ್ತಡ ಉಂಟಾಗಿದ್ದು, ಅವರು ಅಸಹಾಯಕರಾಗಿದ್ದಾರೆ. ಅವರ ವರ್ತನೆಯಲ್ಲೇ ಈ ಒತ್ತಡ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಹೇಳಿದರು.

ಶಿವಕುಮಾರ್ ತಮ್ಮ ರಿಯಲ್ ಎಸ್ಟೇಟ್ ವ್ಯವಹಾರವನ್ನು ಸ್ಥಾಪಿಸುವುದರಲ್ಲಿ ನಿರತರಾಗಿದ್ದಾರೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತ್ರ ಇತರರಿಗೆ ಕಾನೂನು ಪಾಠ ಹೇಳುವ ಮೂಲಕ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಅವರು ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ರಾಜ್ಯದಲ್ಲಿ ಎಷ್ಟು ಕೊಲೆಗಳು ನಡೆದಿವೆ ಎಂಬುದಕ್ಕೆ ಉತ್ತರಿಸಬೇಕು” ಎಂದು ಆಗ್ರಹಿಸಿದರು.

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಎಸ್‌ಐಆರ್‌ ವಿಚಾರದಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇದೆಲ್ಲವನ್ನೂ ಜನರು ಗಮನಿಸುತ್ತಿದ್ದಾರೆ. ಸೂಕ್ತ ಸಮಯ ಬಂದಾಗ ಆಡಳಿತಾರೂಢ ಪಕ್ಷಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಕೇರಳದಲ್ಲಿ ಕಾಂಗ್ರೆಸ್ ಸರ್ಕಾರ ಎಸ್‌ಐಆರ್‌ ಅನ್ನು ಒಪ್ಪಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಸರ್ಕಾರಕ್ಕೆ ಸಮಸ್ಯೆಯಾಗಿದೆ. ಚುನಾವಣಾ ಆಯೋಗ ತನ್ನ ಕೆಲಸ ಮಾಡಲು ಬಿಡಲಿ. ನಿಜವಾಗಿಯೂ ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದವರಿಗೆ ಅದನ್ನು ಸೇರ್ಪಡೆಗೊಳಿಸಲು ಅವಕಾಶ ದೊರೆಯಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದರು. ಕೆಲ ದಿನಗಳ ಹಿಂದಷ್ಟೇ ವಿದ್ಯುತ್ ದರ ಕಡಿಮೆ ಇತ್ತು. ಇದೀಗ ವಿದ್ಯುತ್ ದರ ಹೆಚ್ಚಿಸಲಾಗಿದೆ ಎಂದು ಟೀಕಿಸಿದರು.

ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ನವದೆಹಲಿಯ ಆಕಾಶವಾಣಿ ಭವನದ ಬಳಿ ಎಸ್‌ಐಆರ್‌ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ತಮ್ಮ ಪಕ್ಷದೊಳಗಿನ ಬಂಡಾಯವನ್ನು ತಡೆಯುವ ಉದ್ದೇಶದಿಂದ ಎಂದು ಆರೋಪಿಸಿದರು.

ಹಂಚಿಕೊಳ್ಳಿ: