ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಗೋಡು ತಿಮ್ಮಪ್ಪರಿಗೆ ಹೆಲಿಕಾಪ್ಟರ್ ಸೌಲಭ್ಯದ ಆಹ್ವಾನ
ಸಮಾಜ ಸೇವೆ ವಿಭಾಗದಲ್ಲಿ ಕಾಗೋಡು ತಿಮ್ಮಪ್ಪ ಅವರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಣೆ ಮಾಡಿದೆ. ಹಿರಿಯ ನಾಯಕನಿಗೆ ರಾಜ್ಯದ ಅತ್ಯುನ್ನತ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಸಚಿವ ಮಧು ಬಂಗಾರಪ್ಪ ಅವ...

2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರನ್ನು ಸಚಿವ ಮಧು ಬಂಗಾರಪ್ಪ ಭೇಟಿ ಮಾಡಿ ಅಭಿನಂದಿಸಿದರು. ಈ ವೇಳೆ ವಿಡಿಯೋ ಕರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಪ್ರಶಸ್ತಿ ಸ್ವೀಕರಿಸಲು ಬರಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಆದರೆ ಇದನ್ನು ನಯವಾಗಿ ನಿರಾಕರಿಸಿದ ಕಾಗೋಡು ತಿಮ್ಮಪ್ಪ ಅವರು ತಮ್ಮ ಸರಳತೆಯನ್ನು ಮೆರೆದಿದ್ದಾರೆ. ವಯೋಸಹಜ ಅನಾರೋಗ್ಯದ ಕಾರಣದಿಂದ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲು ಸರ್ಕಾರ ನಿರ್ಧರಿಸಿದೆ.




