ಮುಖ್ಯ ವಿಷಯಕ್ಕೆ ಹೋಗಿ
The Karnataka Today
14 Oct
ಸುದ್ದಿ
ರಾಜಕೀಯ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ವಿಜಯಪುರ: ರಾಜ್ಯ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ತೀವ್ರ ಸಂಚಲನ ಸೃಷ್ಟಿಸಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಡಿ ತೋರಿಸಿ ಅವರ ರಾಜೀನಾಮೆ ಪಡೆಯಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​​ ಯತ್ನಾ...

· ವಿಜಯಪುರ
‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ
ಹಂಚಿಕೊಳ್ಳಿ:

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಡಿ ತೋರಿಸಿ ಬಲವಂತವಾಗಿ ರಾಜೀನಾಮೆ ಪಡೆದಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಇರುವ ಎಲ್ಲ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅಂದು ರಾಹುಲ್ ಗಾಂಧಿ ಅಹಿಂದ ನಾಯಕ ಎಂದು ಹೊಗಳಿದರೂ, ಬಳಿಕ ಪ್ರಿಯಾಂಕಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ಸಿಡಿ ಪ್ರದರ್ಶಿಸಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದಿದ್ದಾರೆ ಎಂದು ಯತ್ನಾಳ್ ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರನ್ನೂ ಇದೇ ರೀತಿ ಇಕ್ಕಟ್ಟಿಗೆ ಸಿಲುಕಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಹಂಚಿಕೊಳ್ಳಿ: