ವಿಜಯಪುರ: ಬಿ.ವೈ. ವಿಜಯೇಂದ್ರ ನಾಯಕತ್ವ ಬದಲಾವಣೆಯ ನಂತರವೇ ಮಾತುಕತೆ ಎಂದ ಬಸನಗೌಡ ಪಾಟೀಲ್ ಯತ್ನಾಳ್
ಬಿ.ವೈ. ವಿಜಯೇಂದ್ರ ನಾಯಕತ್ವ ಬದಲಾವಣೆಯಾದ ಬಳಿಕವೇ ಬಿಜೆಪಿಗೆ ಮರಳುವ ಬಗ್ಗೆ ಮುಂದಿನ ನಿರ್ಧಾರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದು, ಹೊಂದಾಣಿಕೆ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ವಿಜಯೇಂದ್ರ ನನ...

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಜೊತೆ ಯಾವುದೇ ರಾಜಕೀಯ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ. ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ತಮ್ಮ ರಾಜಕೀಯ ಬೆಳವಣಿಗೆಗೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದ ಅವರು, ನಾಯಕತ್ವ ಬದಲಾವಣೆಯಾದರೆ ಮಾತ್ರ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲು ತಾವು ದೆಹಲಿಗೆ ಹೋಗುತ್ತಿಲ್ಲ ಎಂದು ಹೇಳಿರುವ ಅವರು, ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆತರೆ ಮಾತ್ರ ಮರು ಸೇರ್ಪಡೆ ಬಗ್ಗೆ ಯೋಚಿಸುವುದಾಗಿ ಪುನರುಚ್ಚರಿಸಿದ್ದಾರೆ.




