ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಜ್ಞಾನ

ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ‌ ವಿವಾದದ ಸುಳಿಯಲ್ಲಿ ಬಾನು ಮುಷ್ತಾಕ್

ಮಂಡ್ಯ: ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಬಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ. ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ...

ಸಂಪಾದಕ· 1 ನಿಮಿಷ ಓದು· ಮಂಡ್ಯ
ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ‌ ವಿವಾದದ ಸುಳಿಯಲ್ಲಿ ಬಾನು ಮುಷ್ತಾಕ್
ಹಂಚಿಕೊಳ್ಳಿ:

ಮಂಡ್ಯ: ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ। ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರಕ್ಕೆ ಸಾಹಿತಿ ಬಾನು ಮುಷ್ತಾಕ್‌ ಪುಷ್ಪ ನಮನ ಸಲ್ಲಿಸಿದ್ದು ವಿವಾದಕ್ಕೆ ತಿರುಗಿದೆ.

ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಬಾನು ಮುಷ್ತಾಕ್‌ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.

ಅದಕ್ಕೆ ಬಾನು ಮುಷ್ತಾಕ್‌ ಒಪ್ಪಲಿಲ್ಲ. ಆದರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚಪ್ಪಲಿ ಹೊಲೆಯುವುದು ನಮ್ಮ ವೃತ್ತಿ. ಚಪ್ಪಲಿ ನಮ್ಮ ಮನೆ ದೇವರು ಎಂದು ಸರ್ಮಥಿಸಿಕೊಂಡಿದ್ದಾರೆ.

ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವವಿದೆ ಎಂದು ಸಮರ್ಥನೆ ನೀಡಿದರು.

ಹಂಚಿಕೊಳ್ಳಿ: