ಬೇ ಓವಲ್ ನಲ್ಲಿ ಶುಕ್ರವಾರ ನಡೆಯುವ ಭಾರತ-ನ್ಯೂಜಿಲೆಂಡ್ 4ನೇ ಏಕದಿನಕ್ಕೆ ಮಳೆ ಭೀತಿ ಕಡಿಮೆ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯಲ್ಲಿ ಮಳೆ ಅಡ್ಡಿಯಾಗುತ್ತಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ನಾಲ್ಕನೇ ಪಂದ್ಯದಲ್ಲಿ ಹವಾಮಾನ ಅನುಕೂಲಕರವಾಗಿರುವ ನಿರೀಕ್ಷೆಯಿದ್ದು, ಗೆಲುವು ಸಾಧಿಸಿ ಸರಣಿ ಕೈವಶ...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ನಾಲ್ಕನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಕಡಿಮೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೇ ಓವಲ್ ಮೈದಾನದಲ್ಲಿ ಮಳೆಯಾಗುವ ಸಂಭವ ಕೇವಲ ಶೇ.1ರಷ್ಟು ಮಾತ್ರವಿದ್ದು, ಪೂರ್ಣ ಪಂದ್ಯ ನಡೆಯುವ ನಿರೀಕ್ಷೆಯಿದೆ. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತ, ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ಗುರಿ ಹೊಂದಿದೆ. ತಂಡದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಿಕೊಳ್ಳಲಿದ್ದು, ಇಶಾನ್ ಕಿಶನ್, ತಿಲಕ್ ವರ್ಮಾ ಮತ್ತು ಯಶ್ ಠಾಕೂರ್ ತಂಡ ಸೇರಿಕೊಂಡಿದ್ದಾರೆ.




