ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕ್ರೀಡೆ

ಭಾರತ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡಕ್ಕೆ ಬ್ರೆಟ್ ರಾಂಡೆಲ್ ಸೇರ್ಪಡೆ

ಭಾರತ ವಿರುದ್ಧದ ಏಕದಿನ ಸರಣಿಯ ಉಳಿದ ಎರಡು ಪಂದ್ಯಗಳಿಗೆ ನ್ಯೂಜಿಲೆಂಡ್‌ ತಂಡವು ದಾಖಲೆ ಬೌಲರ್ ಬ್ರೆಟ್‌ ರಾಂಡೆಲ್‌ ಅವರನ್ನು ಸೇರ್ಪಡೆಗೊಳಿಸಿದೆ. ಇವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5 ಎಸೆತಗಳಲ್ಲಿ 5 ವಿಕೆಟ್ ಪಡೆದ ಮ...

IND vs NZ 4th ODI: 5 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿ ವಿಶ್ವದಾಖಲೆ ಬರೆದ ವೇಗಿ ನ್ಯೂಜಿಲೆಂಡ್ ತಂಡ ಸೇರ್ಪಡೆ..! ಯಾರು ಈ ಮಾರಕ ವೇಗಿ?
ಹಂಚಿಕೊಳ್ಳಿ:

ಭಾರತದ ವಿರುದ್ಧ ನಡೆಯಲಿರುವ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ನ್ಯೂಜಿಲೆಂಡ್ ತಂಡವು ವೇಗದ ಬೌಲರ್ ಬ್ರೆಟ್ ರಾಂಡೆಲ್ ಅವರನ್ನು ಸೇರಿಸಿಕೊಂಡಿದೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಐದು ಎಸೆತಗಳಲ್ಲಿ ಐದು ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ್ದ 31 ವರ್ಷದ ರಾಂಡೆಲ್, ಶುಕ್ರವಾರದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಸಾಧ್ಯತೆ ಇದೆ. ಇದರೊಂದಿಗೆ ಸರಣಿಯ ಕೊನೆಯ ಪಂದ್ಯಕ್ಕಾಗಿ ಆಲ್‌ರೌಂಡರ್ ಜೋಶ್ ಕ್ಲಾರ್ಕ್ಸನ್ ಅವರನ್ನೂ ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ಟೆಸ್ಟ್ ಸರಣಿಯ ಸಿದ್ಧತೆಗಾಗಿ ತಂಡದ ಕೋಚಿಂಗ್ ಸಿಬ್ಬಂದಿಯಲ್ಲೂ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.

ಹಂಚಿಕೊಳ್ಳಿ: