ಮುಖ್ಯ ವಿಷಯಕ್ಕೆ ಹೋಗಿ
The Karnataka Today
5 Oct
Latest
ಕ್ರೀಡೆ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪಾಕಿಸ್ತಾನವನ್ನು ಮಣಿಸಿ ಚಿನ್ನ ಗೆದ್ದ ಭಾರತೀಯ ಕ್ರಿಕೆಟ್ ತಂಡ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ಚಿನ್ನದ ಪದಕ ಪಡೆದ ಭಾರತೀಯ ಕ್ರಿಕೆಟ್ ತಂಡ

ಸಂಪಾದಕೀಯ ಡೆಸ್ಕ್· 1 ನಿಮಿಷ ಓದು
ಹಂಚಿಕೊಳ್ಳಿ:

ನಿಶ್ಸಿನ್: ಜಪಾನ್ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ವಿಭಾಗದಲ್ಲಿ ಭಾರತ ತಂಡ ಮತ್ತೆ ಚಿನ್ನದ ಪದಕ ಬಾಚಿಕೊಂಡಿದೆ. ಫೈನಲ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 19 ರನ್`ಗಳ ಅಂತರದಲ್ಲಿ ಮಣಿಸಿದ ಭಾರತ ಮತ್ತೆ ಚಿನ್ನದ ಪದಕಕ್ಕೆ ಮುತ್ತಿಟ್ಟಿತು. ಏಷ್ಯನ್ ಕ್ರೀಡಾಕೂಟದ ಪ್ರಸ್ತುತ ಆವೃತ್ತಿಯಲ್ಲಿ ಭಾರತಕ್ಕೆ ಇದು 19ನೇ ಚಿನ್ನದ ಪದಕವಾಗಿದೆ. ಜಪಾನ್ ನ ನಿಶ್ಸಿನ್ ನ ಕೊರೋಗಿ ಮೈದಾನದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ನೀಡಿದ್ದ 212 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಪಾಕಿಸ್ತಾನ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 192 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಈ ಮೂಲಕ 19 ರನ್ ಗಳ ಅಂತರದ ವಿರೋಚಿತ ಗೆಲುವು ಸಾಧಿಸಿತು. ಪಾಕಿಸ್ತಾನ ಪರ ಹಸನ್ ನವಾಜ್ 96 ರನ್ ಗಳಿಸಿ ಕೇವಲ 4 ರನ್ ಅಂತರದಲ್ಲಿ ಶತಕ ವಂಚಿತರಾದರು. ಅಂತೆಯೇ ಪಾಕಿಸ್ತಾನವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಭಾರತದ ಪರ ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಶಿವಂ ದುಬೆ ತಲಾ 2 ವಿಕೆಟ್ ಪಡೆದರು.

ಹಂಚಿಕೊಳ್ಳಿ: