ಹಾಂಗ್‌ಕಾಂಗ್ ಸಿಕ್ಸಸ್: ಆಸ್ಟ್ರೇಲಿಯಾವನ್ನು ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದ ಅಫ್ಘಾನಿಸ್ತಾನ
ಹಾಂಗ್‌ಕಾಂಗ್ ಸಿಕ್ಸಸ್ 2026 ಟೂರ್ನಿಯ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ ಅಫ್ಘಾನಿಸ್ತಾನ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇಮ್ರಾನ್ ಮಿರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಅಫ್ಘಾನಿಸ...

ಹಾಂಗ್‌ಕಾಂಗ್‌ನಲ್ಲಿ ನಡೆದ ಸಿಕ್ಸಸ್ 2026 ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಅಫ್ಘಾನಿಸ್ತಾನ ತಂಡ ಐತಿಹಾಸಿಕ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 115 ರನ್ ಕಲೆಹಾಕಿದರೆ, ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನಕ್ಕೆ ಇಮ್ರಾನ್ ಮಿರ್ ಅವರ ಅಜೇಯ 53 ರನ್ ನೆರವಾಯಿತು. ಕರೀಂ ಜನತ್ ಎರಡು ವಿಕೆಟ್ ಪಡೆದು ಬೌಲಿಂಗ್‌ನಲ್ಲಿ ಮಿಂಚಿದರು. ಇದೇ ಟೂರ್ನಿಯಲ್ಲಿ ಕೃನಾಲ್ ಪಾಂಡ್ಯ ನೇತೃತ್ವದ ಭಾರತ ತಂಡವು ಕಳಪೆ ಪ್ರದರ್ಶನ ನೀಡಿ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬಿದ್ದಿದೆ.




