ನ್ಯೂಜಿಲೆಂಡ್ ಸರಣಿ: ಟೀಂ ಇಂಡಿಯಾದಿಂದ ನಾಲ್ವರು ಆಟಗಾರರ ಔಟ್, ಶ್ರೇಯಸ್ ಅಯ್ಯರ್‌ಗೆ ನಾಯಕತ್ವ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ನಾಯಕ ಶುಭಮನ್ ಗಿಲ್ ಸೇರಿ ನಾಲ್ವರನ್ನು ಕೈಬಿಡಲಾಗಿದ್ದು, ಶ್ರೇಯಸ್ ಅಯ್ಯರ್ ನಾಯಕತ್ವ ವಹಿಸಲಿದ್ದಾರ...

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಅಂತಿಮ ಎರಡು ಪಂದ್ಯಗಳಿಗೆ ಶುಭಮನ್ ಗಿಲ್, ಕೆಎಲ್ ರಾಹುಲ್, ಕುಲದೀಪ್ ಯಾದವ್ ಮತ್ತು ಅನ್ಶುಲ್ ಕಾಂಬೋಜ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮುಂಬರುವ ಟೆಸ್ಟ್ ಸರಣಿಯ ಸಿದ್ಧತೆಗಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಶ್ರೇಯಸ್ ಅಯ್ಯರ್ ಅವರು ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಇವರ ಬದಲಿಗೆ ತಿಲಕ್ ವರ್ಮಾ, ಕುಮಾರ್ ಕುಶಾಗ್ರ ಮತ್ತು ಯಶ್ ಠಾಕೂರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಹ್ಯಾಮಿಲ್ಟನ್‌ನಲ್ಲಿ ನಡೆದ ಮೂರನೇ ಪಂದ್ಯ ಮಳೆಯ ಕಾರಣ ರದ್ದಾಗಿದ್ದರೂ, ಭಾರತ ಈಗಾಗಲೇ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.




