ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಕ್ರೀಡೆ

ವಿರೇಂದ್ರ ಸೆಹ್ವಾಗ್ ಭವಿಷ್ಯ: 2027ರ ಏಕದಿನ ವಿಶ್ವಕಪ್ ಗೆಲ್ಲಲು ಭಾರತ ತಂಡಕ್ಕೆ ಬೌಲಿಂಗ್ ಬಲ ಅಗತ್ಯ

2027ರ ಏಕದಿನ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಿದ್ಧತೆ ನಡೆಸುತ್ತಿದ್ದು, ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ವಿಶ್ವಕಪ್ ಗೆಲ್ಲಲು ಭಾರತ ತನ್ನ ಬೌಲಿಂಗ್ ವಿಭಾಗವನ್ನು ಬಲಪಡಿಸಿಕ...

· ಬೆಂಗಳೂರು ನಗರ
'ಈ ಸಲ ನಾವು...': 2027ರ ಏಕದಿನ ವಿಶ್ವಕಪ್ ಟೂರ್ನಿಯ ಬಗ್ಗೆ ಅಚ್ಚರಿ ಭವಿಷ್ಯ ನುಡಿದ ವಿರೇಂದ್ರ ಸೆಹ್ವಾಗ್..!
ಹಂಚಿಕೊಳ್ಳಿ:

ಬೆಂಗಳೂರು: 2027ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗಾಗಿ ಸಕಲ ಕ್ರಿಕೆಟ್ ತಂಡಗಳು ಸಿದ್ಧತೆಯನ್ನು ಚುರುಕುಗೊಳಿಸಿವೆ. ಈ ಮಹತ್ವದ ಏಕದಿನ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಳ್ಳಲು ಎಲ್ಲಾ ತಂಡಗಳು ಸಜ್ಜಾಗಿವೆ. ಕಳೆದ ಬಾರಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೋಲನ್ನೇ ಕಾಣದೆ ಫೈನಲ್ ತಲುಪಿದ್ದರೂ, ಪ್ರಶಸ್ತಿ ನಿರ್ಣಾಯಕ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಪರಾಭವಗೊಂಡಿದ್ದ ಟೀಂ ಇಂಡಿಯಾ, ಇದೀಗ ಮುಂಬರುವ ಏಕದಿನ ವಿಶ್ವಕಪ್ ಗೆಲ್ಲುವ ನಿಟ್ಟಿನಲ್ಲಿ ಯೋಜನೆ ರೂಪಿಸುತ್ತಿದೆ.

ಸ್ವದೇಶದಲ್ಲಿ ಇತ್ತೀಚೆಗಷ್ಟೇ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಿತ್ತು. ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಬೀಗಿತು. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದ್ದ ಭಾರತ ತಂಡ, ಅಂತಿಮ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದರೂ ಸೋಲನ್ನು ಅನುಭವಿಸಬೇಕಾಯಿತು. ಇದು ಹಲವು ಸಂಶಯಗಳಿಗೆ ಕಾರಣವಾಗಿತ್ತು.

ಭವಿಷ್ಯ ನುಡಿದ ವಿರೇಂದ್ರ ಸೆಹ್ವಾಗ್

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, 2027ರ ಏಕದಿನ ವಿಶ್ವಕಪ್ ಬಗ್ಗೆ ಅಚ್ಚರಿಯ ಭವಿಷ್ಯವಾಣಿಯನ್ನು ನುಡಿದಿದ್ದಾರೆ. ಭಾರತ ತಂಡವು ಈ ಬಾರಿಯ ಏಕದಿನ ವಿಶ್ವಕಪ್ ಗೆಲ್ಲಬೇಕಾದರೆ ತನ್ನ ಬೌಲಿಂಗ್ ವಿಭಾಗವನ್ನು ಇನ್ನಷ್ಟು ಸದೃಢಗೊಳಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಅದೇ ರೀತಿ, 2027ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಭಾರತ ತಂಡದ ಬೌಲಿಂಗ್‌ನಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಲಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬುಮ್ರಾ ಕೀ ಪ್ಲೇಯರ್ ಆಗಲಿದ್ದಾರೆ

2027ರ ಏಕದಿನ ವಿಶ್ವಕಪ್ ಟೂರ್ನಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ವರ್ಕ್‌ಲೋಡ್ ಮ್ಯಾನೇಜ್‌ಮೆಂಟ್ ಸಲುವಾಗಿ ಜಸ್ಪ್ರೀತ್ ಬುಮ್ರಾಗೆ ಪದೇ ಪದೇ ವಿಶ್ರಾಂತಿ ನೀಡಲಾಗುತ್ತಿದೆ. ಬುಮ್ರಾ ಇಲ್ಲದ ಸಮಯದಲ್ಲಿ ಯುವ ಬೌಲರ್‌ಗಳು ಲಭ್ಯವಿರುವ ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ಎಡವುತ್ತಿದ್ದಾರೆ. ಈ ವಿಷಯದ ಬಗ್ಗೆಯೂ ಸೆಹ್ವಾಗ್ ಮುಕ್ತವಾಗಿ ಮಾತನಾಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಬುಮ್ರಾ ಆಡಿರಲಿಲ್ಲ. ಆ ಸರಣಿಯಲ್ಲಿ ಪ್ರಸಿದ್ದ್ ಕೃಷ್ಣ, ಗುರ್ನೂರ್ ಬ್ರಾರ್ ಹಾಗೂ ಮೊಹಮ್ಮದ್ ಸಿರಾಜ್ ತಂಡದಲ್ಲಿ ಆಡುವ ಅವಕಾಶ ಪಡೆದಿದ್ದರು. ಆದರೆ, ಅವರು ತಮಗೆ ದೊರೆತ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಲಿಲ್ಲ ಎಂದು ಸೆಹ್ವಾಗ್ ತಿಳಿಸಿದ್ದಾರೆ.

'ಪ್ರಸ್ತುತ ಇರುವ ಬೌಲರ್‌ಗಳ ಪೈಕಿ ನಮ್ಮ ತಂಡದ ಅತ್ಯುತ್ತಮ ಬೌಲರ್ ಜಸ್ಪ್ರೀತ್ ಬುಮ್ರಾ. ನಮ್ಮ ಬೌಲಿಂಗ್ ವಿಭಾಗ ಇನ್ನಷ್ಟು ಬಲಿಷ್ಠವಾದರೆ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯನ್ನು ನಾವು ಸುಲಭವಾಗಿ ಗೆಲ್ಲಬಹುದು' ಎಂದು ವಿರೇಂದ್ರ ಸೆಹ್ವಾಗ್ 2027ರ ಏಕದಿನ ವಿಶ್ವಕಪ್ ಕುರಿತಂತೆ ಭವಿಷ್ಯ ನುಡಿದಿದ್ದಾರೆ.

ಹಂಚಿಕೊಳ್ಳಿ: