ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಅವರ ನಿಧನಕ್ಕೆ ಸಂತಾಪ
ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾಗಿ ಹಲವಾರು ಸಮಾಜಮುಖಿ ಚಟುವಟಿಕೆಗಳನ್ನು ಗೈದಂತ ಪ್ರಶಾಂತ್ ಅವರು ನಿಧಾನಕ್ಕೆ ಸಂತಾಪ ಸೂಚಿಸಲಾಯಿತು

ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾದ ಪ್ರಶಾಂತ್ ಅವರ ನಿಧನಕ್ಕೆ ಸಂತಾಪ
ಉಡುಪಿ: ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಾಗೂ ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಪ್ರಶಾಂತ್ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುವ ಸುದ್ದಿ ತೀವ್ರ ದುಃಖವನ್ನುಂಟುಮಾಡಿದೆ.
ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಸಾರಿಗೆ ಕ್ಷೇತ್ರದ ಚಾಲಕರು ಮತ್ತು ನಿರ್ವಾಹಕರ ಹಿತಾಸಕ್ತಿಗಳ ಪರವಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಸರಳ ವ್ಯಕ್ತಿತ್ವ, ಸ್ನೇಹಪರ ನಡೆ ಹಾಗೂ ಸಮಾಜಮುಖಿ ಚಿಂತನೆಗಳ ಮೂಲಕ ಅನೇಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಅವರ ಅಕಾಲಿಕ ಅಗಲಿಕೆಯಿಂದ ಸಾಮಾಜಿಕ ಹಾಗೂ ಸಾರಿಗೆ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬದ ಸದಸ್ಯರು, ಬಂಧುಮಿತ್ರರು ಮತ್ತು ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.ಎಂದು ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸಂತಾಪ ವ್ಯಕ್ತ ಪಡಿಸಿದ್ದಾರೆ
ಭಾವಪೂರ್ಣ ಶ್ರದ್ಧಾಂಜಲಿಗಳು.




