ಬೆಂಗಳೂರು ವಿಮಾನ ನಿಲ್ದಾಣದಲ್ಲಿ 17.5 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಬಂಧಿಸಿದ್ದಾರೆ.ಬ್ಯಾಂಕಾಕ್ನಿಂದ ಬೆಂಗಳೂರ...

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ದ್ರವ್ಯವನ್ನು ಪತ್ತೆ ಹಚ್ಚಿದ್ದಾರೆ. ಬ್ಯಾಂಕಾಕ್ ನಿಂದ ಆಗಮಿಸಿದ ಪ್ರಯಾಣಿಕನೊಬ್ಬ ತನ್ನ ಪಾದರಕ್ಷೆಯ ಒಳಗೆ 500 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ಅಡಗಿಸಿಟ್ಟು ಸಾಗಾಟ ಮಾಡಲು ಪ್ರಯತ್ನಿಸಿದ್ದನು. ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಒಟ್ಟು 17.5 ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.




