ದೆಹಲಿಯ ನಾರ್ತ್ ಬ್ಲಾಕ್ ಸಂಸತ್ ಭವನದಲ್ಲಿ ಅಗ್ನಿ ಅವಘಡ, ಆರು ವಾಹನಗಳಿಂದ ಬೆಂಕಿ ನಂದಿಸುವ ಯತ್ನ
ಸಂಸತ್ನ ನಾರ್ತ್ ಬ್ಲಾಕ್ನಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ವೆಲ್ಡಿಂಗ್ ಕಿಡಿಯಿಂದ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಅಲ್ಲಿದ್ದ ಜನರಲ್ಲಿ...

ದೆಹಲಿಯ ಸಂಸತ್ ಭವನದ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ನವೀಕರಣದ ಕೆಲಸಗಳು ನಡೆಯುತ್ತಿದ್ದಾಗ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ವೆಲ್ಡಿಂಗ್ ಕೆಲಸದ ವೇಳೆ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಕಿಡಿ ಹಾರಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನಾ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಆರು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಆಸ್ತಿಪಾಸ್ತಿ ಹಾನಿಯಾಗಿಲ್ಲ.




