ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಡಿಯೋ

ಯಲಹಂಕ ನ್ಯೂ ಟೌನ್‌ನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಬರ್ಬರ ಹತ್ಯೆ

ಬೆಂಗಳೂರಿನ ಯಲಹಂಕ ನ್ಯೂಟೌನ್‌ನಲ್ಲಿ ಧನಿ ಪ್ರಾಪರ್ಟೀಸ್ ಮಾಲೀಕ ಚರಣ್ ಅವರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಚೇರಿಗೆ ಬರುತ್ತಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು, ಪತ್ನಿಯ ಕಣ್ಣೆದುರೇ...

· ಬೆಂಗಳೂರು ನಗರ
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಹಂಚಿಕೊಳ್ಳಿ:

ಬೆಂಗಳೂರಿನ ಯಲಹಂಕ ನ್ಯೂ ಟೌನ್‌ನಲ್ಲಿ ಧನಿ ಪ್ರಾಪರ್ಟೀಸ್ ಮಾಲೀಕ ಚರಣ್ ಎಂಬುವವರನ್ನು ಇಬ್ಬರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಕಚೇರಿಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚರಣ್ ಅವರ ಪತ್ನಿಯ ಎದುರೇ ಕುತ್ತಿಗೆಗೆ ಲಾಂಗ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮೂಲತಃ ಚನ್ನಪಟ್ಟಣದ ಹರಿಸಂದ್ರ ಗ್ರಾಮದವರಾದ ಚರಣ್, ಬೆಂಗಳೂರು ಮತ್ತು ರಾಮನಗರ ಭಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಘಟನಾ ಸ್ಥಳಕ್ಕೆ ಯಲಹಂಕ ನ್ಯೂ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಹಂಚಿಕೊಳ್ಳಿ: