ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ವಿಶ್ವ

ನವದೆಹಲಿ: ಜೆಫ್ರಿ ಎಪ್ಸ್ಟೀನ್ ಜೊತೆಗಿನ ಫೋಟೋ ವೈರಲ್, ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿವಾದ

ಜೆಫ್ರಿ ಎಪ್ಸ್ಟೀನ್ ಜೊತೆ ಕೇಂದ್ರ ಸಚಿವ ಹರ್ದೀಪ್ ಪುರಿ ಫೋಟೋ ವೈರಲ್ ಆಗಿದ್ದು, ಇದು ಭಾರತದ ರಾಜಕೀಯದಲ್ಲಿ ದೊಡ್ಡ ವಿವಾದ ಸೃಷ್ಟಿಸಿದೆ. ಪ್ರತಿಪಕ್ಷಗಳು ಈ ಭೇತಿಯ ಬಗ್ಗೆ ಪ್ರಶ್ನಿಸಿವೆ. ಪುರಿ ಈ ಹಿಂದೆ ತಮ್ಮ ಭೇಟಿಗಳು ಅ...

ಜೆಫ್ರಿ ಎಪ್ಸ್ಟೀನ್ ಜತೆ ಹರ್ದೀಪ್ ಸಿಂಗ್ ಪುರಿ ಫೋಟೋ ವೈರಲ್: ಕೇಂದ್ರ ಸಚಿವರ ವಿರುದ್ಧ ಮುಗಿಬಿದ್ದ ಪ್ರತಿಪಕ್ಷಗಳು
ಹಂಚಿಕೊಳ್ಳಿ:

ಅಮೆರಿಕದ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೊತೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕಾಣಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ರಾಜಕೀಯ ಸಂಚಲನ ಮೂಡಿಸಿದೆ. ಈ ಭೇಟಿಯ ಕುರಿತು ಸಂಜಯ್ ರಾವತ್, ಶ್ರೀನಿವಾಸ್ ಬಿ.ವಿ. ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಸಚಿವರನ್ನು ಪ್ರಶ್ನಿಸಿದ್ದಾರೆ. ಈ ಹಿಂದೆ ಎಪ್ಸ್ಟೀನ್ ಭಾಗವಹಿಸಿದ್ದ ಅಧಿಕೃತ ಸಭೆಗಳಲ್ಲಿ ತಾನು ಪಾಲ್ಗೊಂಡಿದ್ದೆ ಹೊರತು ವೈಯಕ್ತಿಕ ಭೇಟಿ ಮಾಡಿರಲಿಲ್ಲ ಎಂದು ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ ನೀಡಿದ್ದರು. ಸದ್ಯ ಈ ಫೋಟೋ ವೈರಲ್ ಆಗುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಹಂಚಿಕೊಳ್ಳಿ: