ಪಾಕಿಸ್ತಾನದ ಥಾರ್ಪಾರ್ಕರ್ನಲ್ಲಿ ಆಂಬ್ಯುಲೆನ್ಸ್ ಸ್ಫೋಟ: 10 ಮಂದಿ ದುರ್ಮರಣ
ದಕ್ಷಿಣ ಪಾಕಿಸ್ತಾನದಲ್ಲಿರುವ ಸರ್ಕಾರಿ ಸ್ವಾಮ್ಯದ ವೈದ್ಯಕೀಯ ಕೇಂದ್ರವೊಂದರಲ್ಲಿ ನಿಲ್ಲಿಸಿದ್ದ ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡು, ಆ ಸೌಲಭ್ಯದ ರೋಗಿಯೊಬ್ಬರು ಸೇರಿದಂತೆ ಕನಿಷ್ಠ 10 ಜನರು ಸಾವನ್ನಪ್...

ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಥಾರ್ಪಾರ್ಕರ್ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಒಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 10 ಜನರು ಮೃತಪಟ್ಟಿದ್ದಾರೆ. ರೋಗಿಗಳನ್ನು ಆಸ್ಪತ್ರೆಯಿಂದ ಸ್ಥಳಾಂತರಿಸುವ ವೇಳೆ ಈ ಅನಾಹುತ ಸಂಭವಿಸಿದ್ದು, ಮೃತಪಟ್ಟವರಲ್ಲಿ ವೈದ್ಯಕೀಯ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರು ಸೇರಿದ್ದಾರೆ ಎಂದು ಪೊಲೀಸ್ ಅಧಿಕಾರಿ ಆರಿಫ್ ಅಜೀಜ್ ಮತ್ತು ಖಲೀಲ್ ಅಬ್ರೋ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ತೀವ್ರ ಸಂತಾಪ ಸೂಚಿಸಿದ್ದು, ಈ ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.




