ವಾಷಿಂಗ್ಟನ್‌ನಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮ ಹಂತಕ್ಕೆ
ವಾಷಿಂಗ್ಟನ್: ಪ್ರಸ್ತಾವಿತ ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಕುರಿತಾದ ಮಾತುಕತೆ ಅಂತಿಮ ಹಂತಕ್ಕೆ ತಲುಪಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾ...

ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮಾತುಕತೆಗಳು ಅಂತಿಮ ಹಂತ ತಲುಪಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಹೊಸ ಒಪ್ಪಂದವು ಹಿಂದಿನ ಒಪ್ಪಂದಗಳಿಗಿಂತ ಭಿನ್ನವಾಗಿರಲಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಭಾರತಕ್ಕೆ ಭೇಟಿ ನೀಡಿ ವಿದೇಶಾಂಗ ಸಚಿವ ಜೈಶಂಕರ್ ಅವರೊಂದಿಗೆ ವಿವಿಧ ಕ್ಷೇತ್ರಗಳ ಬಲವರ್ಧನೆ ಕುರಿತು ಚರ್ಚಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರು ಅಮೆರಿಕದ ಪ್ರತಿನಿಧಿ ಜೇಮಿಸನ್ ಗ್ರೀರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.




